ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ.

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ.

ನೌಕರರು, ವರ್ತಕರು, ಅಂಗಡಿಗಳ ಮಾಲೀಕರು, ಗುತ್ತಿಗೆದಾರರು ಹೀಗೆ ಆರ್ಥಿಕವಾಗಿ ಸಬಲರಾದವರು ಕೂಡ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆನ್ನಲಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸದೃಢರು 2019ರ ಸೆಪ್ಟೆಂಬರ್ 30ರ ಒಳಗೆ ಕಾರ್ಡ್ ವಾಪಸ್ ಮಾಡಬೇಕು. ಇಲ್ಲವೇ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆಮಾಡಿ ಅವರು ಎಷ್ಟು ದಿನದಿಂದ ಅಕ್ಕಿ ಪಡೆದಿದ್ದಾರೆ ಎಂಬುದನ್ನು ಲೆಕ್ಕಹಾಕಿ ಮುಕ್ತ ಮಾರುಕಟ್ಟೆ ದರ ಒಂದು ಕೆಜಿಗೆ 35 ರೂ. ನಂತೆ ದಂಡ ವಸೂಲಿ ಮಾಡಲಾಗುವುದು. ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…