ಸುದ್ದಿ

ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

36

ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು.

ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದರು.

ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ, ಸುಮಲತಾ, ಅಭಿಶೇಖ್, ರಾಕ್‌ಲೈನ್ ವೆಂಕಟೇಶ್ ಅವರುಗಳು ಮಂಡ್ಯದತ್ತ ತೆರಳಿದರು. ಮಂಡ್ಯದಲ್ಲಿ ಇಂದು ಸ್ವಾಭಿಮಾನಿ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸುಮಲತಾ ಅವರು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಭಾರಿ ನಿರೀಕ್ಷೆಯನ್ನು ಈ ಸಮಾವೇಶ ಹುಟ್ಟುಹಾಕಿದ್ದು, ಸುಮಲತಾ ಅವರೊಂದಿಗೆ ದರ್ಶನ್, ಯಶ್ ಅವರೂಗಳೂ ಸಹ ಭಾಗವಹಿಸುತ್ತಿದ್ದಾರೆ. ಮಂಡ್ಯದ ಜಿದ್ದಾ-ಜಿದ್ದಿನ ಲೋಕಸಮರದಲ್ಲಿ ಭಾರಿ ಅಂತರದಲ್ಲಿ ಜಯಿಸಿ ಎದುರಾಳಿಗಳಿಗೆ ಕೃತಿಯ ಮೂಲಕ ಈಗಾಗಲೇ ಉತ್ತರಿಸಿರುವ ಸುಮಲತಾ ಅವರು ಮಾತಿನ ಮೂಲಕ ಇಂದು ಉತ್ತರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…