ಸುದ್ದಿ

ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

108

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.

ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ ಸ್ವಾಭಿಮಾನ ಸಮಾವೇಶ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಐದು ಕ್ವಿಂಟಾಲ್ ಧಾರವಾಡ ಪೇಡಾವನ್ನು ಉದ್ಯಮಿ ನಾರಾಯಣ ಕಲಾಲ್ ರವಾನಿಸಿದ್ದಾರೆ. ಇದಕ್ಕಾಗಿ ಅವರು 2.10 ಲಕ್ಷ ರು ಹಣ ವ್ಯಯಿಸಿದ್ದಾರೆ.ಬಾಬುಸಿಂಗ್ ಠಾಕೂರ್ ಪೇಡಾ ಫ್ಯಾಕ್ಟರಿಯಲ್ಲಿ ತಯಾರಾಗಿರುವ ಪೇಡಾವನ್ನು ವಿಶೇಷ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿದ್ದು, ಈಗಾಗಲೇ ಮಂಡ್ಯ ತಲುಪಿವೆ.

ಈ ಹಿಂದೆ ಅಂಬರೀಶ್ ಅವರು ಯಶ್, ರಾಧಿಕಾ ದಂಪತಿಯ ಮಗುವಿಗೆ ಕಲಘಟಗಿ ತೊಟ್ಟಿಲು ನೀಡುವ ಸಂಬಂಧ ನಾರಾಯಣ ಕಲಾಲ್ ಅವರಿಗೆ ಫೋನ್ ಮಾಡಿದ್ದರು. ತನ್ನ ಬೇಡಿಕೆಗೆ ಅನುಗುಣವಾಗಿ ತೊಟ್ಟಿಲು ತಯಾರಿಸಿ ಕೊಡುವಂತೆ ಅಂಬಿ ಕಲಾಲ್ ಅವರಲ್ಲಿ ಕೇಳಿಕೊಂಡಿದ್ದರು. ಬಳಿಕ ನಾರಾಯಣ್ ಕಲಾಲ್ ಅವರು ಕಲಘಟಗಿಯ ಮೂಲದ ಶ್ರೀಧರ್ ಸಾವುಕಾರ್ ಅವರಲ್ಲಿ ತೊಟ್ಟಿಲಿಗೆ ಆರ್ಡರ್ ಮಾಡಿಸಿಕೊಟ್ಟಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ