ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…