ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-
ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-
ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.
‘ರಾಜ್ ವಿಷ್ಣು’ ಚಿತ್ರದ ತಾರಾಗಣ :-
ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…