ವ್ಯಕ್ತಿ ವಿಶೇಷಣ

ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

478

ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ್ವತಃ ಕಬಡ್ಡಿಪಟು, ಕುಸ್ತಿ ಪಟುವಾಗಿದ್ದ ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು.

ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು.

ಆದ್ರೆ ವಿಧಿ ಅದಾಗಲೇ ಪುಟ್ಟಣ್ಣಯ್ಯ ಬದುಕಿನ ಹೋರಾಟವನ್ನು ಕಿತ್ತುಕೊಂಡು ಬಿಟ್ಟಿತ್ತು. ಬಳಿಕ ಪುಟ್ಟಣ್ಣಯ್ಯ ಮೃತದೇಹವನ್ನು ಹುಟ್ಟೂರು ಕ್ಯಾತನಹಳ್ಳಿಗೆ ರವಾನಿಸಲಾಯಿತು. ಈ ವೇಳೆ ಸಾವಿರಾರು ಅಭಿಮಾನಿಗಳು ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. ಇನ್ನು ನಟ ದರ್ಶನ್ ರಾತ್ರೋರಾತ್ರಿ ಪುಟ್ಟಣ್ಣಯ್ಯರ ಅಂತಿಮ ದರ್ಶನ ಪಡೆದರು. ಈ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…