ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ ಜನರ ಮೇಲೆ ಪ್ರವಾಹ ಪರಿಣಾಮ ಬೀರಿದೆ ಎನ್ನಲಾಗಿದೆ.

ನದಿ ನೀರು ನಿರ್ದಿಷ್ಠ ಮಟ್ಟವನ್ನು ತಲುಪಿದ್ದು, ಒಂದೆರಡು ದಿನಗಳಲ್ಲಿ ಅಪಾಯದ ಮಟ್ಟವನ್ನು ದಾಟಬಹುದು ಎಂದು ಒಳನಾಡಿನ ಜಲಮಾರ್ಗ ಪ್ರಾಧಿಕಾರದ ವಿಭಾಗ ಅಧಿಕಾರಿ ವಿ. ಗಾಂಧಿಯಾ ಅವರು ತಿಳಿಸಿದ್ದಾರೆ.ಡಿಖೋವ್, ಧನ್ಸಿರಿ, ಜಿಯಾ ಭಾರಲಿ, ಪುತಿಮರಿ ಮತ್ತು ಬೆಕಿ ನದಿಗಳು ಕೂಡ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜೋರ್ಹತ್‍ನ ನಿಮತಿ ಘಾಟ್‍ನಲ್ಲಿ ನದಿ ಈಗಾಗಲೇ ತುಂಬಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುವಾಹಟಿ ಸಮೀಪದ ದೀಪರ್ ಬಿಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಎರಡು ಮನೆಗಳು ನಾಶವಾಗಿದ್ದು, ಓರ್ವ ವ್ಯಕ್ತಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪ್ರವಾಹದಿಂದಾಗಿ ಜುಲೈ 10 ರಂದು ಸಂಜೆ 5 ಗಂಟೆಯ ಹೊತ್ತಿಗೆ ಒಟ್ಟು 13,267.74 ಹೆಕ್ಟೇರ್ ಬೆಳೆ ಪ್ರದೇಶ ನಾಶವಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‍ಡಿಎಂಎ) ವರದಿ ಮಾಡಿದೆ.

ರಾಜ್ಯದಲ್ಲಿ ಮಳೆ ನಿರಂತರವಾಗಿ ಹೆಚ್ಚಾಗಲಿದ್ದು ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು 24*7 ನಿಯಂತ್ರಣ ಕೊಠಡಿಗಳನ್ನು ಸಕ್ರಿಯಗೊಳಿಸುವಂತೆ ಅಸ್ಸಾಂ ಸಿಎಂ ಸೂಚಿಸಿದ್ದಾರೆ. ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿನ ಔಷಧಿಗಳ ದಾಸ್ತಾನು ನವೀಕರಿಸಲು ಮತ್ತು ವೈದ್ಯರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಆಯುಕ್ತರಿಗೆ ಸಿಎಂ ಸೂಚಿಸಿದ್ದಾರೆ.

ಪ್ರವಾಹ ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೂ ಪರಿಣಾಮ ಬೀರಿದ್ದು, ಬ್ರಹ್ಮಪುತ್ರದಿಂದ ಬರುವ ಪ್ರವಾಹದ ನೀರು ಕಾಜಿರಂಗ ರಾಷ್ಟ್ರೀಯ ಉದ್ಯಾನದ ಕೆಲವು ಭಾಗಗಳನ್ನು ಪ್ರವೇಶಿಸಿದ್ದು, ಪ್ರಾಣಿಗಳು ತಮ್ಮ ಜೀವ ರಕ್ಷಣೆಗಾಗಿ ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‍ಡಿಆರ್‍ಎಫ್) ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಸೂಕ್ತ ಕ್ರಮ ಕೈಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…