News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಸುದ್ದಿ

ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

58

ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ.

ಯಾರ ರಾಜೀನಾಮೆ ಸ್ವೀಕೃತ..?

 1. ರಾಮಲಿಂಗಾ ರೆಡ್ಡಿ
 2. ಆನಂದ್‌ ಸಿಂಗ್‌
 3. ಪ್ರತಾಪಗೌಡ ಪಾಟೀಲ್‌
 4. ಗೋಪಾಲಯ್ಯ
 5. ನಾರಾಯಣ ಗೌಡ
  ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು ಸಲ್ಲಿಸಿರುವ ರಾಜೀನಾಮೆ ಪತ್ರ ಸ್ವೀಕೃತಗೊಂಡಿವೆ. ಹಾಗೆಯೇ, ಜೆಡಿಎಸ್‌ನ ಮಹಾಲಕ್ಷ್ಮಿ ಲೇಔಟ್‌ ಶಾಸಕ ಗೋಪಾಲಯ್ಯ ಮತ್ತು ಕೆ.ಆರ್‌.ಪೇಟೆ ಶಾಸಕ ನಾರಾಯಣಗೌಡ ಅವರ ರಾಜೀನಾಮೆ ಪತ್ರಗಳನ್ನ ಸ್ಪೀಕರ್‌ ರಮೇಶ್‌ ಕುಮಾರ್ ಸ್ವೀಕೃತ ಮಾಡಿದ್ದಾರೆ.

ಯಾವ ರಾಜೀನಾಮೆ ತಿರಸ್ಕೃತ..?

 1. ರಮೇಶ್‌ ಜಾರಕಿಹೊಳಿ,2. ಬಿ.ಸಿ.ಪಾಟೀಲ್‌,3. ಭೈರತಿ ಬಸವರಾಜ್‌,4. ಎಸ್‌.ಟಿ.ಸೋಮಶೇಖರ್‌,5. ಮಹೇಶ್ ಕುಮಟಳ್ಳಿ,6. ಮುನಿರತ್ನ,7. ಶಿವರಾಮ್‌ ಹೆಬ್ಬಾರ್,8. ಎಚ್‌.ವಿಶ್ವನಾಥ್‌.ಕಾಂಗ್ರೆಸ್‌ನ ರಮೇಶ್‌ ಜಾರಕಿಹೊಳಿ, ಬಿ.ಸಿ.ಪಾಟೀಲ್‌, ಭೈರತಿ ಬಸವರಾಜ್‌, ಎಸ್‌.ಟಿ.ಸೋಮಶೇಖರ್‌, ಮಹೇಶ್ ಕುಮಟಳ್ಳಿ, ಮುನಿರತ್ನ, ಶಿವರಾಮ್‌ ಹೆಬ್ಬಾರ್, ಜೆಡಿಎಸ್‌ನ ಹುಣಸೂರು ಶಾಸಕ ಎಚ್‌.ವಿಶ್ವನಾಥ್‌ ಅವರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ಅನೂರ್ಜಿತಗೊಂಡಿವೆ.

ನಾಮಪತ್ರ ಸ್ವೀಕೃತಗೊಂಡಿರುವ ಆನಂದ್ ಸಿಂಗ್‌, ನಾರಾಯಣಗೌಡ, ಪ್ರತಾಪ್ ಗೌಡ ಅವರಿಗೆ ಶುಕ್ರವಾರ ತಮ್ಮ ಮುಂದೆ ಹಾಜರಾಗಲು ಸ್ವೀಕರ್‌ ನೋಟಿಸ್‌ ಕಳುಹಿಸಿದ್ದಾರೆ. ಹಾಗೆಯೇ, ರಾಮಲಿಂಗಾರೆಡ್ಡಿ ಮತ್ತು ಗೋಪಾಲಯ್ಯ ಅವರಿಗೆ ಇದೇ 15ರಂದು ಹಾಜರಾಗಲು ನೋಟಿಸ್ ನೀಡಿದ್ದಾರೆ. ರಾಜೀನಾಮೆ ಕ್ರಮಬದ್ಧವಾಗಿ ಸಲ್ಲಿಸದ ಶಾಸಕರಿಗೆ ತಿಳಿವಳಿಕೆ ನೋಟಿಸ್‌ ನೀಡಿದ್ದು, ಮತ್ತೆ ಇಚ್ಚಿಸಿದ್ದಲಿ ಇದೇ 12ರಂದು ಖುದ್ದು ಹಾಜರಾಗುವ ಮೂಲಕ ಕ್ರಮಬದ್ಧವಾಗಿ ರಾಜೀನಾಮೆ ಪತ್ರ ಸಲ್ಲಿಸಬಹುದು ಎಂದು ಅದರಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ಮಧ್ಯೆ, ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಶಾಸಕರು ನನ್ನನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ನೀವು ತ್ವರಿತವಾಗಿ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇದಕ್ಕೆ ಸ್ಪೀಕರ್ ರಮೇಶ್‌ ಕುಮಾರ್‌, ಯಾವ ಶಾಸಕರೂ ನನ್ನನ್ನು ಭೇಟಿಯಾಗಿಲ್ಲ. ಭೇಟಿಯಾದ ಬಳಿಕ ಸಂವಿಧಾನಬದ್ಧವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.

About the author / 

admin

Categories

Date wise

 • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

  ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ