ಸುದ್ದಿ

ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

32

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ