ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ.
ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಸಾಮೂಹಿಕ ವಿವಾಹ ನೆರವೇರಿಸಿದ್ದಾರೆ. ಈ ಕಲ್ಯಾಣೋತ್ಸವದಲ್ಲಿ 32 ನವಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.
ಈ ವಿವಾಹ ಮಹೋತ್ಸವದಲ್ಲಿ ಅಂತರ್ಧರ್ಮ ವಿವಾಹವಾದ ಹಿಂದೂ ಹಾಗೂ ಇಸ್ಲಾಂ ಧರ್ಮದ ಒಂದು ಜೋಡಿಯು ಎಲ್ಲರ ಗಮನ ಸೆಳೆಯಿತು. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಅಂತರ್ ಧರ್ಮ ವಿವಾಹದ ಮೂಲಕ ನವಜೀವನಕ್ಕೆ ಪಾದಾರ್ಪಣೆ ಮಾಡಿದ ಹಸೀನ ಕೂಡ ತಮ್ಮ ಜೀವನಕ್ಕೆ ಬಸವತತ್ವವನ್ನು ಅಳವಡಿಸಿಕೊಂಡಿದ್ದಾರೆ.
ಸಮಾಜ ಪರಿವರ್ತನೆಗಾಗಿ ಅಂತರ್ಜಾತಿ ಹಾಗೂ ಅಂತರ್ಧರ್ಮ ವಿವಾಹಗಳಿಂದಾದರೂ ಈ ಮೌಢ್ಯ ನಿಷೇಧವಾಗಬೇಕೆಂದು ನೂತನ ವಧು ಹಸೀನ ಹೇಳಿದ್ದಾರೆ.ಮುರುಘಾ ಮಠದಲ್ಲಿ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವ ಜಾತಿ ಧರ್ಮಗಳನ್ನು ಮೀರಿ ನಿಂತಿದೆ. ಆಷಾಢ ಶುಕ್ರವಾರ ಅನ್ನೋದನ್ನೂ ಲೆಕ್ಕಿಸದೇ 32 ನವಜೋಡಿಗಳು ನವಜೀವನಕ್ಕೆ ಕಾಲಿಡುವ ಮೂಲಕ ಮೌಢ್ಯ ನಿಷೇಧಕ್ಕೆ ಪ್ರೇರಣೆಯಾದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….