ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗುವ ವೆಬ್‍ಸೈಟ್ ಹೀಗಿದೆ:
http://karresults.nic.in/
http://kseeb.kar.nic.in/

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಳ್ಳಾರಿಯ ಕೊಟ್ಟೂರು ಹಿಂದೂ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಚೈತ್ರಾ ಬಿ. 589 ಅಂಕಗಳಿಸಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಬೆಂಗಳೂರಿನ ವಿಜಯನಗರದ ಆರ್‍ಎನ್‍ಎಸ್ ಕಾಲೇಜಿನ ಶ್ರೀನಿಧಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಳಿಕೆಯ ಸತ್ಯಸಾಯಿ ಕಾಲೇಜಿನ ಸಾಯಿ ಸಮರ್ಥ್ 595 ಅಂಕಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಸೃಜನಾ ಎನ್ ಮತ್ತು ಕುಂದಾಪುರದ ಎಸ್‍ವಿ ಕಾಲೇಜಿನ ರಾಧಿಕಾ ಪೈ 596 ಅಂಕ ಗಳಿಸಿದ್ದಾರೆ.