News

ಉಪಯುಕ್ತ ಮಾಹಿತಿ

ಈಗ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ..!ತಿಳಿಯಲು ಈ ಲೇಖನ ಓದಿ ..

365

 ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.

ಈ ಯೋಜನೆಯಡಿ ಮಾರ್ಚ್ 2019ರ ವೇಳೆಗೆ ಎಲ್ಲಾ ಪಂಚಾಯತ್ ಗಳಲ್ಲಿ ಅತಿ ವೇಗದ ಬ್ರಾಡ್ ಬ್ಯಾಂಡ್ ಸೇವೆಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೊ, ಭಾರ್ತಿ ಏರ್ ಟೆಲ್, ಐಡಿಯಾ ಸೆಲ್ಯುಲರ್ ಮತ್ತು ವೊಡಫೋನ್ ಕಂಪೆನಿಗಳು ಭಾರತ್ ನೆಟ್ ಯೋಜನೆಯಡಿ ಜನತೆಗೆ ಸೇವೆಗಳನ್ನು ಒದಗಿಸಲು ಆಸಕ್ತಿ ತಳೆದಿವೆ ಎಂದು ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಅರುಣಾ ಸುಂದರರಾಜನ್ ತಿಳಿಸಿದ್ದಾರೆ. ಭಾರತ್ ನೆಟ್ ಯೋಜನೆಗೆ ಒಟ್ಟು ವೆಚ್ಚ 45,000 ಕೋಟಿ ರೂಪಾಯಿ ವೆಚ್ಚ ತಗುಲಲಿದ್ದು, ಅದರಲ್ಲಿ 11,200 ಕೋಟಿ ರೂಪಾಯಿ ಮೊದಲ ಹಂತಕ್ಕೆ ವೆಚ್ಚವಾಗಿದೆ.

ಯೋಜನೆಯ ಮೊದಲನೇ ಹಂತದಲ್ಲಿ 1 ಲಕ್ಷ ಗ್ರಾಮ ಪಂಚಾಯತ್ ಗಳನ್ನು ಸಂಪರ್ಕಿಸಲಾಗಿದ್ದು, ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ದೂರ ಸಂಪರ್ಕ ನಿರ್ವಾಹಕರು ಗ್ರಾಮಾಂತರ ಪ್ರದೇಶದ ಮನೆಗಳಿಗೆ ಕನಿಷ್ಠ 2 ಮೆಗಾಬೈಟ್ ಪ್ರತಿ ಸೆಕೆಂಡ್ ಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲಿದ್ದಾರೆ ಎಂದು ಸುಂದರರಾಜನ್ ಹೇಳಿದರು.

ಅಸ್ಸಾಂ, ಹರ್ಯಾಣ, ಮಧ್ಯ ಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ ಮತ್ತು ಸಿಕ್ಕಿಂ ರಾಜ್ಯಗಳು  ಬಿಎಸ್ಎನ್ಎಲ್ ನ ಆಪ್ಟಿಕಲ್ ಫೈಬರ್ ನಡಿ ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಈ ರಾಜ್ಯಗಳು ಸೇರ್ಪಡೆಯಾಗಿರಲಿಲ್ಲ.  ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ ಬ್ಯಾಂಡ್ ಸೇವೆ ದರ ಬಹಳಷ್ಟು ಕಡಿಮೆಯಾಗಲಿದೆ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…