ಗ್ಯಾಜೆಟ್

ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

316

ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

 

 

ಬ್ಲ್ಯಾಕ್‌ಬೆರಿ ಒಎಸ್, ಬ್ಲ್ಯಾಕ್‌’ಬೆರಿ 10 ಮತ್ತು ವಿಂಡೋಸ್ 8.0 ಮತ್ತು ಅದಕ್ಕಿಂತ ಹಳೆಯದಾದ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಒಂದು ಕಹಿ ಸುದ್ದಿಯಿದೆ. ಈ ಎಲ್ಲಾ ಫೋನ್ ಬಳಕೆದಾರರಿಗೆ 2017, ಡಿ.31ರ ನಂತರ ವಾಟ್ಸಾಪ್ ತನ್ನ ಸೇವೆ ಕೊನೆಗೊಳಿಸಲಿದೆ. ಈ ಫೋನ್ ಗಳಿಗೆ ವಾಟ್ಸಾಪ್ ಅನ್ನು ಹೊಸದಾಗಿ ಅಭಿವೃದ್ಧಿಪಡಿಸಲಾಗುವುದಿಲ್ಲ.

ಫೇಸ್ ಬುಕ್ ಒಡೆತನದ ಮೊಬೈಲ್ ಮೆಸೇಂಜಿಂಗ್ ಆಪ್ ಆಗಿರುವ ವಾಟ್ಸಾಪ್ ಕೆಲವೊಂದು ಸ್ಮಾರ್ಟ್ ಫೋನ್ ಗಳಲ್ಲಿ ಡಿಸೆಂಬರ್ 31 ರಿಂದ ಕೆಲಸ ಮಾಡುವುದಿಲ್ಲ.ಈ ಸಂಬಂಧ ವಾಟ್ಸಾಪ್ ಬ್ಲಾಗ್‌ನಲ್ಲಿ ಸ್ಪಷ್ಟ ಮಾಹಿತಿ ನೀಡಲಾಗಿದೆ. ನೋಕಿಯಾ ಎಸ್‌40ಯಿಂದಲೂ ತಮ್ಮ ಸೇವೆ 2018, ಡಿ.31ರಿಂದ ಕೊನೆಯಾಗಲಿದೆ ಎಂದು ತಿಳಿಸಿತ್ತು.

ಅಲ್ಲದೆ, ಆ್ಯಂಡ್ರಾಯ್ಡ್ 3.3.7 ಮತ್ತು ಅದಕ್ಕಿಂತ ಹಳೆಯ (ಜಿಂಜರ್‌ಬ್ರೆಡ್) ಫೋನ್‌ಗಳಲ್ಲಿ 2020, ಫೆ.1ರಿಂದ ಕಾರ್ಯ ಸ್ಥಗಿತಗೊಳಿಸುವುದಾಗಿ ಆ್ಯಪ್ ತಿಳಿಸಿತ್ತು.

ವಾಟ್ಸಾಪ್ ನ ಹಲವು ಫೀಚರ್ ಗಳನ್ನು(ವೈಶಿಷ್ಟ್ಯಗಳನ್ನು) ಭವಿಷ್ಯದಲ್ಲಿ ಬದಲಾವಣೆ ಮಾಡಲಾಗ್ತಿದೆ. ಭವಿಷ್ಯದ ಫೀಚರ್ ಗಳಿಗೆ ಈ ಸ್ಮಾರ್ಟ್ ಫೋನ್ ಗಳು ಸಪೋರ್ಟ್ ಮಾಡುವುದಿಲ್ಲ.

ಇಂತಹ ಫೋನ್ ಗಳಲ್ಲಿ ವಾಟ್ಸಾಪ್ ಬಳಕೆ ಮಾಡಲು ಆಪರೇಟಿಂಗ್ ಸಿಸ್ಟಂ ಅನ್ನು ಹೊಸ ಒ.ಎಸ್. ವರ್ಷನ್ ಗೆ ಬದಲಿಸಿಕೊಳ್ಳಬೇಕಿದೆ. ಅಂಡ್ರಾಯಿಡ್ OS 4.0+ , ಐಫೋನ್ iOS 7+, ವಿಂಡೋಸ್ ಫೋನ್ 8.1+ ಅಪ್ ಗ್ರೇಡ್ ಮಾಡಿಕೊಳ್ಳಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…