ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ.
ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ.
ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ ದರ ವಿಧಿಸಲು ಕಾರಣ, ಚೀನಾ ಗಡಿಯಲ್ಲಿ ಇರುವ ಚಾಂಗ್ಲಾಂಗ್ ಜಿಲ್ಲೆಯ ವಿಜೋಯ್ ನಗರ ಎಂಬ ಈ ಗ್ರಾಮಕ್ಕೆ ಯಾವುದೇ ವಸ್ತು ತರಬೇಕಾದರೂ ಅದನ್ನು 156 ಕಿ.ಮೀ ಹಾದಿಯಲ್ಲಿ ನಡೆದುಕೊಂಡೇ ಹೊತ್ತು ತರಬೇಕು.
ಹೀಗಾಗಿ ಈ ಊರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಕೆಲಸ ಮಾಡುವ ಚಕ್ಮಾ ಜನಾಂಗ ಪ್ರತಿ 1 ಸಿಮೆಂಟ್ ಮೂಟೆ ಸಾಗಿಸಲು 8 ಸಾವಿರ ರು. ದರ ವಿಧಿಸುತ್ತಿದೆ. ಸಾರಿಗೆ ವ್ಯವಸ್ಥೆ ಸರಿ ಇಲ್ಲ ಅಂದರೆ ಹೇಗೆಲ್ಲ ಸರಕು ಸಾಗಣೆ ಮೇಲೆ ದುಬಾರಿ ಬೆಲೆ ತೆರಬೇಕಾದೀತು ಅನ್ನೋದಕ್ಕೆ ಇದೆ ಉದಾಹರಣೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…