ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ.
ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ ಬಳಿಯ ಕಡಲು ಸಂಪೂರ್ಣ ಕದಡಿಹೋಗಿದೆ.
ನದಿ ನೀರು ಸಮುದ್ರ ಸೇರುವ ಉಡುಪಿಯ ಪಡುಕೆರೆ, ಕೋಡಿ ಬೆಂಗ್ರೆ, ಗಂಗೊಳ್ಳಿ, ಪಡುಬಿದ್ರೆಯಲ್ಲಿ ಈ ದೃಶ್ಯ ಈಗ ಸಾಮಾನ್ಯವಾಗಿದೆ. ನಿಜವಾಗಿ ಸಮುದ್ರದ ತೀವ್ರತೆ ಮತ್ತು ಭೋರ್ಗರೆತ ಕಣ್ತುಂಬಿಕೊಳ್ಳಬೇಕಾದರೆ ಈಗ ಅರಬ್ಬೀ ಸಮುದ್ರವನ್ನು ನೋಡಬೇಕು.
ಮಾಮೂಲಿಯಾಗಿ ಸಮುದ್ರದ ನೀರು ತಿಳಿಯಾಗಿರುತ್ತದೆ. ನೀಲಿ ಬಣ್ಣದಲ್ಲಿ ಕಂಗೊಳಿಸುತ್ತದೆ. ಪಶ್ಚಿಮ ಘಟ್ಟದ ತಪ್ಪಲು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುಗಿರುವುದಿಂದ ಭಾರೀ ಪ್ರಮಾಣದ ನೀರು ಸಮುದ್ರದತ್ತ ಧುಮ್ಮುಕ್ಕುತ್ತಿದೆ. ಹೀಗಾಗಿ ಸಮುದ್ರ ಪುಡಿಯಾಗಿದೆ. ಹರಿಯುವ ನದಿ ಖನಿಜ, ಲವಣಾಂಶ, ಕೊಳೆತ ತರಗೆಲೆ, ಮರ, ಮಣ್ಣು ಎಲ್ಲವನ್ನೂ ತಂದಿದೆ. ಸಮುದ್ರದ ಉಪ್ಪು ನೀರಿನ ಜೊತೆ ನದಿಯ ಕೆನ್ನೀರು ಸೇರಿ ಕಡಲು ಬಣ್ಣ ಬದಲಿಸಿದೆ.
ನಿಜಾರ್ಥದ ಸಮುದ್ರ ನೋಡುವ ಮನಸ್ಸಿದ್ದವರು ಸಮುದ್ರದ ವೈಭವ ನೋಡುವ ಆಸೆಯಿರುವವರು ಈಗ ಉಡುಪಿಗೆ ಬರಬೇಕು. ಸಮುದ್ರಕ್ಕಿಳಿದು ಆಡುವ ಅವಕಾಶ ಇಲ್ಲದಿದ್ದರೂ ಕಡಲಿನ ಅಬ್ಬರವನ್ನು ಕಣ್ತುಂಬಿಕೊಳ್ಳಬಹುದು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್‌ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್, ಭಾರತೀಯ ಏರ್‌ಲೈನ್ಸ್ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…