ಸುದ್ದಿ

ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

30

ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ ಇಷ್ಟು ವಿಷಮಿಸಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಜನರು ದಂಗೆ ಏಳುತ್ತಾರೆ ಎಂದು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯಕ್ಕೆ ಪ್ರಾಧಿಕಾರದವರೇ ಬಂದು ಪರಿಶೀಲನೆ ನಡೆಸಲಿ. ನಮ್ಮ ಪರಿಸ್ಥಿತಿ ಹೇಗಿದೆ ಎಂದು ಖುದ್ದಾಗಿ ನೋಡಿಕೊಂಡು ಹೋಗಲಿ. ಅದನ್ನು ಬಿಟ್ಟು ಎಲ್ಲಿಯೋ ಕುಳಿತು ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ನೀರು ಬಿಟ್ಟರೆ ಹೋರಾಟ ನಡೆಸುವುದು ಅನಿವಾರ್ಯ ಎಂದರು.

ನನ್ನ 90 ವರ್ಷದ ಬದುಕಿನಲ್ಲಿ ಕುಡಿಯುವ ನೀರಿಗಾಗಿ ಇಷ್ಟೊಂದು ತತ್ವಾರ ಉಂಟಾಗಿದ್ದನ್ನು ನೋಡಿಲ್ಲ. ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಹಳ್ಳಿಯ ಜನರು ನಗರ, ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೆರೆಕಟ್ಟೆಗಳು, ಕೊಳವೆ ಬಾವಿಗಳು ಬತ್ತಿಹೋಗಿವೆ. ಕೆಆರ್‌ಎಸ್‌ನಲ್ಲಿ ಇರುವ ನೀರನ್ನೇ ಕುಡಿಯುವ ಉದ್ದೇಶಕ್ಕೆ ಉಳಿಸಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…