ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus
ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.
ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.
ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.