ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.
ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…