ಸುದ್ದಿ

ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

54

ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು.

ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ. ತಕ್ಷಣ ಅವತನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಇನ್ನುಳಿದ ಮಹಿಳೆಯರೂ ಕೂಡ ತೀವ್ರ ಅಸ್ವಸ್ಥಗೊಂಡಾಗ ಕೆಲವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಯಿತು.

ವೈದ್ಯರಾದಡ ಆ.ನವೀನ್, ಡಾ.ಗಣೇಶ್ ಬಾಬು ಪ್ರಥಮ ಚಿಕಿತ್ಸೆ ನೀಡಿ ಅಪಾಯದಿಂದ ಪಾರು ಮಾಡಿದರು. ನಂತರ ತಾಲ್ಲೂಕು ವೈದ್ಯಾಧಿಕಾರಿ ಕಾರ್ಖಾನೆಯ ಕ್ಯಾಂಟೀನ್ ಪರಿಶೀಲಿಸಿದಾಗ ಆಹಾರ ತಯಾರಿಕೆಗೆ ಕಲುಷಿತ ನೀರು ಬಳಸಿರುವುದೇ ಪ್ರಮುಖ ಕಾರಣವಾಗಿದ್ದು, ಕ್ಯಾಂಟೀನ್ ಸ್ವಚ್ಛತೆ ಹಾಗೂ ಸುರಕ್ಷತೆ ಇಲ್ಲದಿರುವುದು ಕಂಡುಬಂದಿತು.

ಈ ಸಂಬಂಧ ಕಾರ್ಖಾನೆ ಹಾಗೂ ಕ್ಯಾಂಟೀನ್ ಮಾಲೀಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವೈದ್ಯಾಧಿಕಾರಿಗಳ ಮಂದಿ ಬಂದ ನಂತರ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.