ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ ಸಾಕಾರಗೊಳಿಸಿ, ಕಲಬುರಗಿ ನಗರಕ್ಕೆ ನಿರಂತರ 24ಘಿ7 ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ಧೃಡ ವಿಶ್ವಾಸದಿಂದ ನುಡಿದರು.ನಗರ ಪ್ರತಿವರ್ಷ ಬೆಳೆಯುತ್ತಾ ಹೋಗುತ್ತಿದೆ. ಇಂದು ನಗರದ ಜನಸಂಖ್ಯೆ ಅಧಿಕವಾಗುತ್ತಿದೆ. ಆ ಕಾರಣದಿಂದಾಗಿ ನೀರು ಕೂಡ ಅದೇ ಪ್ರಮಾಣದಲ್ಲಿ ಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.
ಕಲಬುರಗಿ ಮಹಾನಗರದಲ್ಲಿ ಐಎಸ್‍ಐ ಗುರುತು ಇಲ್ಲದ ನೀರಿನ ಕ್ಯಾನ್ ವಾಟರ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಸ್ಮಾರ್ಟ್ ಸಿಟಿ ಕೇಂದ್ರ ಸರ್ಕಾರ ಮಾಡುವಂತಹದ್ದು, ಅದಕ್ಕೆ ನಾವು ಕಾಯ್ತಿಲ್ಲ. ರಾಜ್ಯ ಈಗಾಗಲೇ ಎಲ್ಲಾ ರೀತಿಯಿಂದ ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾದರಿಯಲ್ಲೇ ಅಭಿವೃದ್ಧಿ ಪಡಿಸುತ್ತಿದೆÉ. ಈ ನಿಟ್ಟಿನಲ್ಲಿ ಈಗಾಗಲೇ ಪೊಲೀಸ್ ಆಯುಕ್ತರ ಕಾರ್ಯಾಲಯ, ರಿಂಗ್ ರೋಡ್ ಸೇರಿದಂತೆ ಹಲವು ಕೆಲಸಗಳನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.
ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದಿಂದ ಹೈದ್ರಾಬಾದ-ಕರ್ನಾಟಕಕ್ಕೆ 371ಜೆ ಬಂದ ನಂತರ 30 ಸಾವಿರ ಉದ್ಯೋಗ ಸೃಷ್ಟಿಯಾಗಿವೆ. ಖಾಲಿ ಹುದ್ದೆಗಳ ತುಂಬುವ ನಿಟ್ಟಿನಲ್ಲಿ ಹೈದ್ರಾಬಾದ್ ಕರ್ನಾಟಕ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಸೇವೆ ಸಲ್ಲಿಸಿರುವ ಅಧಿಕಾರಿಗಳನ್ನು ಈ ಭಾಗಕ್ಕೆ ವರ್ಗಾಯಿಸುವಂತಹ ಕೆಲಸ ನಡೆದಿದೆ ಎಂದು ಅವರು ಹೇಳಿದರು.
ರಾಜ್ಯದ ಎಲ್ಲಾ ಮಹಾನಗರಗಳ ವ್ಯಾಪ್ತಿಯಲ್ಲಿ ಎಲ್ಲಿ ದೊಡ್ಡ ಕಾಲುವೆಗಳು ಇವೆಯೋ ಅವುಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಅದಷ್ಟು ಬೇಗ ಕೈಗೊಳ್ಳಲಾಗುವುದು. ರಸ್ತೆ ಅಭಿವೃದ್ಧಿ ಸೇರಿದಂತೆ ನಗರ ಅಭಿವೃದ್ಧಿಗೆ 8 ಲಕ್ಷಕ್ಕಿಂತ ಜನಸಂಖ್ಯೆ ಕಡಿಮೆ ಇರುವ ರಾಜ್ಯದ ಮಹಾನಗರ ಪಾಲಿಕೆಯಲ್ಲಿ ಈ ವರ್ಷ 125 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ. 10 ಲಕ್ಷ ಜನಸಂಖ್ಯೆ ಇರುವ ಮಹಾನಗರಗಳಿಗೆ 150 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದೇವೆ ಎಂದು ವಿವರಿಸಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…