ಸುದ್ದಿ

ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

140

ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ

ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ಗೆ ಪತ್ರ ಬರೆದಿದ್ದೇನೆ,”ಎಂದು ಗಡ್ಕರಿ ಹೇಳಿದ್ದಾರೆ.  ಪ್ರಸ್ತುತ ವಾರಾಣಸಿ ಮತ್ತು ರಾಯ್‌ ಬರೇಲಿಯ ಎರಡು ರೈಲ್ವೆ ನಿಲ್ದಾಣಗಳಲ್ಲಿ ಜೇಡಿ ಮಣ್ಣಿನಿಂದ ಮಾಡಿದ ಲೋಟಗಳು, ಕುಡಿಕೆಗಳು ಮತ್ತು ತಟ್ಟೆಗಳನ್ನು ಬಳಸಲಾಗುತ್ತಿದೆ. ಇದನ್ನು ದೇಶದ ಇತರೆ ರೈಲ್ವೆ ನಿಲ್ದಾಣಗಳಿಗೂ ವಿಸ್ತರಿಸಬೇಕು ಎನ್ನುವುದು ಗಡ್ಕರಿ ಅವರ ಸಲಹೆ. 

”ಏರ್‌ಪೋರ್ಟ್‌ಗಳು ಮತ್ತು ರಾಜ್ಯ ಸಾರಿಗೆ ಸಂಸ್ಥೆಗಳ ಅಧೀನದಲ್ಲಿ ಬರುವ ಬಸ್‌ ಡಿಪೋಗಳಲ್ಲಿನ ಟೀ ಸ್ಟಾಲ್‌ಗಳಲ್ಲಿ ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕು. ನಾವು ಮಾಲ್‌ಗಳಲ್ಲೂ ಇಂಥ ವ್ಯವಸ್ಥೆಗೆ ಉತ್ತೇಜನ ನೀಡಬೇಕು,”ಎಂದು ಗಡ್ಕರಿ ಹೇಳಿದ್ದಾರೆ. ಇದೇ ವೇಳೆ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ(ಕೆವಿಐಸಿ) ನಿರ್ದೇಶನ ನೀಡಿದ್ದಾರೆ. 

ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸರಕಾರವು ಸಶಕ್ತಿಕರಣ್‌ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್‌ ಚಕ್ರಗಳನ್ನು ವಿತರಿಸುತ್ತಿದೆ. ಮಡಿಕೆ ಉತ್ಪಾದಕರನ್ನು ಉತ್ತೇಜಿಸಲು2004ರಲ್ಲಿಯೇ ರೈಲ್ವೆ ಸಚಿವರು ಮಣ್ಣಿನ ಲೋಟಗಳನ್ನು ಬಳಸುವ ಪದ್ಧತಿಗೆ ಚಾಲನೆ ನೀಡಿದ್ದರು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.