ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ
ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ರೈಲ್ವೆ ಸಚಿವ ಪಿಯೂಶ್ ಗೋಯಲ್‌ಗೆ ಪತ್ರ ಬರೆದಿದ್ದೇನೆ,”ಎಂದು ಗಡ್ಕರಿ ಹೇಳಿದ್ದಾರೆ. ಪ್ರಸ್ತುತ ವಾರಾಣಸಿ ಮತ್ತು ರಾಯ್ ಬರೇಲಿಯ ಎರಡು ರೈಲ್ವೆ ನಿಲ್ದಾಣಗಳಲ್ಲಿ ಜೇಡಿ ಮಣ್ಣಿನಿಂದ ಮಾಡಿದ ಲೋಟಗಳು, ಕುಡಿಕೆಗಳು ಮತ್ತು ತಟ್ಟೆಗಳನ್ನು ಬಳಸಲಾಗುತ್ತಿದೆ. ಇದನ್ನು ದೇಶದ ಇತರೆ ರೈಲ್ವೆ ನಿಲ್ದಾಣಗಳಿಗೂ ವಿಸ್ತರಿಸಬೇಕು ಎನ್ನುವುದು ಗಡ್ಕರಿ ಅವರ ಸಲಹೆ.
”ಏರ್‌ಪೋರ್ಟ್‌ಗಳು ಮತ್ತು ರಾಜ್ಯ ಸಾರಿಗೆ ಸಂಸ್ಥೆಗಳ ಅಧೀನದಲ್ಲಿ ಬರುವ ಬಸ್ ಡಿಪೋಗಳಲ್ಲಿನ ಟೀ ಸ್ಟಾಲ್‌ಗಳಲ್ಲಿ ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕು. ನಾವು ಮಾಲ್‌ಗಳಲ್ಲೂ ಇಂಥ ವ್ಯವಸ್ಥೆಗೆ ಉತ್ತೇಜನ ನೀಡಬೇಕು,”ಎಂದು ಗಡ್ಕರಿ ಹೇಳಿದ್ದಾರೆ. ಇದೇ ವೇಳೆ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ(ಕೆವಿಐಸಿ) ನಿರ್ದೇಶನ ನೀಡಿದ್ದಾರೆ.
ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸರಕಾರವು ಸಶಕ್ತಿಕರಣ್ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಚಕ್ರಗಳನ್ನು ವಿತರಿಸುತ್ತಿದೆ. ಮಡಿಕೆ ಉತ್ಪಾದಕರನ್ನು ಉತ್ತೇಜಿಸಲು2004ರಲ್ಲಿಯೇ ರೈಲ್ವೆ ಸಚಿವರು ಮಣ್ಣಿನ ಲೋಟಗಳನ್ನು ಬಳಸುವ ಪದ್ಧತಿಗೆ ಚಾಲನೆ ನೀಡಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….