ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.
ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.
5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.
ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…