ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ.
ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ ಹೆಚ್ಚಾಗುತ್ತಾ ಬಂತು. ಈವರೆಗೆ ಮೃಗೇಂದ್ರ ಬರೋಬ್ಬರಿ 135 ಪುಸ್ತಕಗಳನ್ನು ಬರೆದಿದ್ದಾನೆ. `ಆಜ್ ಕಾ ಅಭಿಮನ್ಯು’ ಎಂಬ ಕಾವ್ಯನಾಮದಲ್ಲಿ ಮೃಗೇಂದ್ರ ಪುಸ್ತಕಗಳನ್ನು ಬರೆಯುತ್ತಿದ್ದಾನೆ.
ಮೃಗೇಂದ್ರನ ತಾಯಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ತಮ್ಮ ಮಗ ಪುಸ್ತಕಗಳನ್ನು ಬರೆಯುವ ಬಗ್ಗೆ ತೋರಿಸುತ್ತಿದ್ದ ಆಸಕ್ತಿಯನ್ನು ಗುರುತಿಸಿ ಆತನನ್ನು ಬೆಂಬಲಿಸಿದ್ದಾರೆ. ಜೊತೆಗೆ ಆತನ ತಂದೆ ರಾಜ್ಯ ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.ಈ ಬಗ್ಗೆ ಮಾತನಾಡಿದ ಬಾಲಕ, ನಾನು ರಾಮಾಯಣದಲ್ಲಿರುವ 51 ಪಾತ್ರಗಳ ಬಗ್ಗೆ ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದೇನೆ. ನಾನು ಬರೆದ ಎಲ್ಲಾ ಪುಸ್ತಕಗಳು 25 ರಿಂದ 100 ಪುಟಗಳನ್ನು ಹೊಂದಿದೆ. ನನ್ನ ಈ ಪ್ರತಿಭೆಯನ್ನು ಮೆಚ್ಚಿ ಡಾಕ್ಟರೇಟ್ ಪದವಿ ನೀಡುವುದಾಗಿ ಲಂಡನ್ ವರ್ಲ್ಡ್ ಯೂನಿವರ್ಸಿಟಿ ಆಫ್ ರೆಕಾರ್ಡ್ಸ್ ಆಫರ್ ನೀಡಿತ್ತು ಎಂದು ತಿಳಿಸಿದ್ದಾನೆ.
ದೊಡ್ಡವನಾದ ಮೇಲೆ ನಾನು ಬರಹಗಾರನಾಗಲು ಇಷ್ಟಪಡುತ್ತೇನೆ. ವಿವಿಧ ವಿಷಯಗಳ ಬಗ್ಗೆ, ಬೇರೆ ಬೇರೆ ಆಯಾಮದಲ್ಲಿ ಇನ್ನೂ ಹಲವಾರು ಪುಸ್ತಕಗಳನ್ನು ಬರೆಯಲು ಬಯಸುತ್ತೇನೆ ಎಂದಿದ್ದಾನೆ.ಉತ್ತರ ಪ್ರದೇಶ ಸಿಎಂ ಯೋಗಿ ಆಧಿತ್ಯನಾಥ್ ಸೇರಿದಂತೆ ಹಲವು ಗಣ್ಯರ ಬಗ್ಗೆ ಈ ಪೋರ ಪುಸ್ತಕ ಬರೆದಿದ್ದು, ಚಿಕ್ಕವಯಸ್ಸಿನಲ್ಲೇ ಈ ಮಟ್ಟಿಗೆ ಸಾಧನೆ ಮಾಡಿರುವುದಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.