ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ.
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ ಬಿಟ್ಟು ಬಿಟ್ಟು ಸುರಿಯುತ್ತಲೇ ಇದ್ದಾನೆ. ಕಳೆದ ಬಾರಿ ಭೂ ಕುಸಿತವುಂಟಾಗಿದ್ದ ಪ್ರದೇಶಗಳ ಜನರು ಸ್ವಲ್ಪವೇ ಜೋರಾಗಿ ಮಳೆ ಬಿದ್ದರೂ ಆತಂಕಪಡುವಂತಾಗಿದ್ದು, ಜೀವ ಕೈಯಲ್ಲಿಯೇ ಹಿಡಿದು ಬದುಕುತ್ತಿದ್ದಾರೆ.ಇದೇ 20ರಿಂದ ಪ್ರತಿ ವರ್ಷದಂತೆ ಮಾನ್ಸೂನ್ ಮಳೆ ಬೀಳಲಿದ್ದು, ಅಪಾಯದ ಸ್ಥಿತಿಯಲ್ಲಿರುವ ಪ್ರದೇಶಗಳಲ್ಲಿ ಮನೆಗಳ ಖಾಲಿ ಮಾಡುವಂತೆ ಮಡಿಕೇರಿ ನಗರದಲ್ಲೇ ಇರುವ ಚಾಮುಂಡೇಶ್ವರಿ ನಗರ,
ಇಂದಿರಾನಗರ ಮತ್ತು ಮಂಗಳಾದೇವಿ ನಗರಗಳ ಜನರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ. ಇದು ಈ ಪ್ರದೇಶಗಳ ಜನರನ್ನು ಆತಂಕಕ್ಕೆ ದೂಡಿದ್ದು, ಜೀವ ಬಿಗಿ ಹಿಡಿದು ಬದುಕುತ್ತಿದ್ದಾರೆ.ಕಳೆದ ಬಾರಿ ಭೂಕುಸಿತದಿಂದ ಕೆಲವು ಮನೆಗಳು ಬಿರುಕು ಬಿಟ್ಟಿದ್ದರೆ, ಕೆಲವು ಮನೆಗಳು ವಾಸಿಸಲು ಯೋಗ್ಯವಲ್ಲದ ಸ್ಥಿತಿಯಲ್ಲಿವೆ. 20ರಿಂದ ಮಾನ್ಸೂನ್ ಮಳೆ ಮತ್ತೆ ಜೋರಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅಪಾಯ ಎದುರಾಗದಂತೆ ಮುನ್ನೇಚ್ಚರಿಕೆ ಕ್ರಮವಾಗಿ ನೋಟಿಸ್ ನೀಡಿದ್ದೇವೆ ಅಷ್ಟೇ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ.
ಆದರೆ ನಮಗೆ ಯಾವುದೇ ಪೂರ್ವ ವ್ಯವಸ್ಥೆ ಮಾಡಿಕೊಡದೆ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ನಾವು ಮನೆಗಳನ್ನು ಖಾಲಿ ಮಾಡಿ ಎಲ್ಲಿಗೆ ಹೋಗೋದು, ಮನೆಗಳು ಬಾಡಿಗೆಗೆ ಸಿಗುತ್ತಿಲ್ಲ, ಸಿಕ್ಕರೂ ಅತ್ಯಂತ ದುಬಾರಿ ಬಾಡಿಗೆ ಇದೆ. ನಾವು ಇಲ್ಲಿಯೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸಾಧ್ಯವಾದರೆ ಮತ್ತೆ ಪರಿಹಾರ ಕೇಂದ್ರಗಳನ್ನು ತೆರೆದು ರಕ್ಷಣೆ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…