ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
Heroine Harshika Poonacha in Appudala Eppudila Movie Stills
ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.
ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…