ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಆಂಧ್ರಪ್ರದೇಶ ಮೂಲದ ಈ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016ರ ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.
ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.
ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.
ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಈ ಬಗ್ಗೆ ವಿಸ್ತøತ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.
ಈ ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…