modi, ಮನೆ

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

356

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….

ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ.  ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.


ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.


ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…