ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

155

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…