ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

ವರದಿಗಳ ಪ್ರಕಾರ ಬಾಲಕನ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ತಾಯಿ ಪುಟ್ಟ ಮಗನನ್ನು ಒಂಟಿಯಾಗಿ ಬಿಟ್ಟು ಹೋಗಿ ಬೇರೊಂದು ಮದುವೆಯಾಗಿದ್ದಾಳೆ. ನಂತರ ಬಾಲಕ ತನ್ನ ತಂದೆಯ ಮಾಜಿ ಸಹೋದ್ಯೋಗಿಯ ಬಳಿ ಬೆಳೆದಿದ್ದಾನೆ. ಅವರನ್ನ ಈತ ಅಂಕಲ್ ಅಂತಾ ಕರೀತಾನೆ. ಮೊದಮೊದಲು ತನ್ನ ಅಂಕಲ್ಗೆ ಪ್ಯಾಕೇಜ್ಗಳನ್ನ ಡೆಲಿವರಿ ಮಾಡಲು ಸಹಾಯ ಮಾಡುತ್ತಿದ್ದ.

ಆದ್ರೆ ನಂತರ ತನ್ನ ಕೆಲಸದ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದು, ತಾನಾಗೇ ಪ್ಯಾಕೇಜ್ಗಳನ್ನ ಡೆಲಿವರಿ ಮಾಡುತ್ತಾನೆ. ಒಂದು ದಿನಕ್ಕೆ 30 ಪ್ಯಾಕೇಜ್ಗಳನ್ನ ತಲುಪಿಸುತ್ತಾನೆ. ಹಾಗೇ ಈತ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗಿದ್ದು, ಜನ ಈ ಬಾಲಕನನ್ನ ಮಿನಿ ಸೆಲೆಬ್ರಿಟಿ ಅಂತ ಕರೀತಾರೆ. ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ವಾಂಗ್ ಕಿಂಗ್ವೀ ಎಂಬವರು ಬಾಲಕನ ಫೋಟೋ ಹಂಚಿಕೊಂಡ ನಂತರ ಚಾಂಗ್ ನ ಕಥೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪುಟ್ಟ ಬಾಲಕ ಸ್ವಲ್ಪ ಕಷ್ಟ ಪಡುತ್ತಾ ನನಗೆ ಪ್ಯಾಕೇಜ್ ಡೆಲಿವರಿ ಮಾಡೋದನ್ನ ಕಂಡು ಆಶ್ಚರ್ಯವಾಯ್ತು ಎಂದು ಅವರು ಬರೆದುಕೊಂಡಿದ್ದಾರೆ.ಈ ಕೆಲಸ ಮಾಡೋದ್ರಲ್ಲಿ ನನಗೆ ಎಷ್ಟು ಸಂತೋಷವಿದೆ ಎಂದ್ರೆ ಮುಂದೆ ದೊಡ್ಡವನಾದ ಮೇಲೂ ಡೆಲಿವರಿ ಬಾಯ್ ಆಗಬೇಕು ಎಂದು ಬಾಲಕ ಹೇಳಿದ್ದಾನೆ.

ಬಾಲಕನ ಬಗ್ಗೆ ಸುದ್ದಿ ವರದಿಯಾದ ಬಳಿಕ ಸ್ಥಳೀಯ ಅಧಿಕಾರಿಗಳು ಆತನನ್ನು ವೆಲ್ಫೇರ್ ಅಸೋಸಿಯೇಷನ್ಗೆ ಕಳಿಸಿದ್ದು, ಬಾಲಕ ಅಲ್ಲಿ ತನ್ನ 7ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾನೆ. ಬಾಲಕನ ತಾಯಿಗಾಗಿ ಕೂಡ ಹುಡುಕಾಟ ನಡೆಸಲಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…