ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಈಗಿನ ಹಾರ ಪದ್ಧತಿ ಇದಕ್ಕೆ ಬಹು ಮುಖ್ಯ ಕಾರಣವಾಗುತ್ತದೆ. ಸಮಾರಂಭಗಳಿಗೆ ಹೋದಾಗ ಇದರಿಂದ ಕೆಲವೊಮ್ಮೆ ಮುಜುಗರ ಪಡುವ ಪರಿಸ್ಥಿತಿ ಉಂಟಾಗುತ್ತದೆ. ತಲೆಹೊಟ್ಟಿಗೆ ಮನೆಯಲ್ಲಿರುವ ವಸ್ತು ಬಳಸಿ ಮದ್ದು ತಯಾರಿಸಬಹುದು.
ಮೆಂತ್ಯ :-
ತಲೆಹೊಟ್ಟಿನಿಂದ ಮುಕ್ತಿ ಪಡೆಯಲು ಎರಡು ಚಮಚ ಮೆಂತ್ಯೆ ಕಾಳನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಹಾಕಿ. ಬೆಳಿಗ್ಗೆ ಎದ್ದ ನಂತ್ರ ಇದನ್ನು ಮಿಕ್ಸಿ ಮಾಡಿ ಮಿಶ್ರಣವನ್ನು ತಲೆಯ ಬುಡಕ್ಕೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿದ್ರೆ ತಲೆಹೊಟ್ಟು ಕಡಿಮೆಯಾಗಲಿದೆ. ವಾರಕ್ಕೆ 2-3 ಬಾರಿ ಈ ಕೆಲಸ ಮಾಡಬೇಕಾಗುತ್ತದೆ.
ಮೊಸರು :-
ಒಳ್ಳೆಯ ಮೊಸರಿನಲ್ಲಿ ತಲೆ ಹೊಟ್ಟು ನಿವಾರಿಸುವ ಶಕ್ತಿ ಇದೆ. ಮೊಸರನ್ನು ತಲೆಗೆ ಹಚ್ಚಿಕೊಳ್ಳಿ. 30 ನಿಮಿಷ ಬಿಟ್ಟು ತಲೆ ಸ್ನಾನ ಮಾಡಿ.
ಬೀಟರೋಟ್ :-
ಬೀಟರೋಟ್ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿ ಬಿಸಿನೀರಿನಲ್ಲಿ ಬೇಯಿಸಿ. ನಂತ್ರ ಆ ನೀರಿನಿಂದ ತಲೆಯ ಬುಡವನ್ನು ಮಸಾಜ್ ಮಾಡಿ. ರಾತ್ರಿ ತಲೆಗೆ ಮಸಾಜ್ ಮಾಡಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡಿ. ಪದೇ ಪದೇ ಇದನ್ನು ಬಳಸಿದ್ರೆ ಬೇಗ ತಲೆಹೊಟ್ಟು ಕಡಿಮೆಯಾಗಲಿದೆ.
ಕಡಲೆಹಿಟ್ಟು :-
ಒಂದು ಚಮಚ ಕಡಲೇ ಹಿಟ್ಟಿಗೆ ಮೊಸರು ಸೇರಿಸಿ ಮಿಕ್ಸ್ ಮಾಡಿ. ಅದನ್ನು ತಲೆಗೆ ಹಚ್ಚಿಕೊಂಡು 10 ನಿಮಿಷ ಬಿಡಿ. ನಂತ್ರ ತಲೆ ಸ್ನಾನ ಮಾಡಿ.
ಅಲೋವೇರಾ ಜೆಲ್ :-
ಅಲೋವೇರಾ ಜೆಲ್ ತಲೆಗೆ ಹಚ್ಚಿಕೊಂಡು ಕೆಲ ಸಮಯ ನಂತ್ರ ತಲೆ ಸ್ನಾನ ಮಾಡಿ. ತಲೆ ಹೊಟ್ಟು ಕಡಿಮೆಯಾಗುವ ಜೊತೆಗೆ ಹೊಳಪು ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….