ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ…
ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ ಅನಧಿಕೃತ ಪ್ರವೇಶವನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮವನ್ನು ಜಾರಿಗೆ ತಂದಿರುವುದಾಗಿ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಮಾತನಾಡಿರುವ ಇಲಾಖೆಯ ಸೂಪರಿಂಟೆಂಟ್ ಬಸಂತ್ ಕುಮಾರ್ ಅವರು, ತಾಜ್ ಮಹಲ್ ನಲ್ಲಿ ಈ ಹಿಂದೆ ಪ್ರವಾಸಿಗರು ಬೆಳಗ್ಗಿನಿಂದ ಸಂಜೆಯವರೆಗೂ ಸಮಯ ಕಳೆಯಬಹುದಿತ್ತು. ಆದರೆ ಈ ವೇಳೆ ತಾಜ್ ಮಹಲ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತಿತ್ತು. ಅಲ್ಲದೆ ಅನಧಿಕೃತವಾಗಿ ಪ್ರವೇಶದ ಅವಕಾಶವೂ ಇತ್ತು. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆತರಲಾಗಿದೆ. ಹೊಸ ನಿಯಮದ ಅನ್ವಯ ಪ್ರವಾಸಿಗರು ತಾಜ್ ಮಹಲ್ ನಲ್ಲಿ 3 ಗಂಟೆಗಳನ್ನು ಮಾತ್ರ ಕಳೆಯಬಹುದು. 3 ಗಂಟೆಗೂ ಅಧಿಕ ಸಮಯದ ಬಳಿಕ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಟರ್ನ್ ಸ್ಟೈಲ್ ಗೇಟ್ ಗಳನ್ನು ಪರಿಚಯಿಲಾಗುತ್ತಿದ್ದು, ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಇವುಗಳನ್ನು ಅಳವಡಿಸಲಾಗುತ್ತದೆ. 7 ಗೇಟ್ ಗಳ ಪೈಕಿ 5 ಗೇಟ್ ಗಳು ಎಕ್ಸಿಟ್ ಗೆ ಮೀಸಲಿಡಲಾಗುತ್ತದೆ. ವಿದೇಶಿಗರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ಗಳು ಇರಲಿದ್ದು, ಟೋಕನ್ ಗಳ ಮೂಲಕವಷ್ಟೇ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಹೊಸ ನಿಯಮಕ್ಕೆ ಪ್ರವಾಸಿಗರ ತೀವ್ರ ವಿರೋಧ , ಇನ್ನು ಪುರಾತತ್ವ ಇಲಾಖೆಯ ಹೊಸ ನಿಯಮಕ್ಕೆ ಪ್ರವಾಸಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ನಾವು ತಾಜ್ ಮಹಲ್ ಸಮಯ ಕಳೆಯಲು ಬರುತ್ತೇವೆ. ಆದರೆ ಪುರಾತತ್ವ ಇಲಾಖೆಯ ಈ ನಿಯಮಗಳಿಂದ ಪ್ರವಾಸಿಗರು ತಾಜ್ ಮಹಲ್ ನಿಂದ ವಿಮುಖರಾಗುವ ಅಪಾಯವಿದೆ. ಕೇವಲ ಮೂರು ಗಂಟೆ ಮಾತ್ರ ಸಮಯಾವಕಾಶ ವಿಧಿಸಿದರೆ ತಾಜ್ ಮಹಲ್ ಗೆ ಆಗಮಿಸಲೂ ಕೂಡ ಪ್ರವಾಸಿಗರು ಎರಡೆರಡು ಬಾರಿ ಯೋಚಿಸುತ್ತಾರೆ. ಇದು ನಿಜಕ್ಕೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಅಸ್ಟ್ರೇಲಿಯಾ ಮೂಲದ ಸೆಲಿನಾ ಎಂಬ ಪ್ರವಾಸಿಗರೂ ಕೂಡ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಭಾರತೀಯ ಪ್ರವಾಸಗರಿಗಿಂತ ವಿದೇಶಗರಿಗೆ ಬಹುತೇಕ 10 ಪಟ್ಟು ಹೆಚ್ಚು ಶುಲ್ಕು ವಿಧಿಸುತ್ತಿದ್ದಾರೆ. ಅದಾಗ್ಯೂ ನಾವು ಇಲ್ಲಿಗೆ ಬರುತ್ತಿದ್ದೇವೆ. ಆದರೆ ಇದೀಗ ಸಮಯದ ಮಿತಿ ವಿಧಿಸಿರುವುದು ನಾವು ಮತ್ತೆ ತಾಜ್ ಮಹಲ್ ಗೆ ಭೇಟಿ ನೀಡಬೇಕೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…