ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.
ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.
ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.
ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.
ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…