ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ನವರಸ ನಾಯಕ ಜಗ್ಗೇಶ್’ರವರು ವೆಂಕಯ್ಯ ನಾಯ್ಡುರವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಸಂದೇಶವನ್ನು ಬರೆದುಕೊಂಡಿದ್ದು, ಇದು ಕನ್ನಡಿಗರಿಗೆ ಅಪಮಾನ ಮಾಡುವ ರೀತಿ ಇದೆ ಎಂದು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲ್ಲಿ ಆಕ್ರೋಶಗೊಂಡಿದ್ದಾರೆ.
ಏನದು ಟ್ವೀಟ್..!
ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು.
ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.
ಕನ್ನಡಿಗರ ಆಕ್ರೋಶಕ್ಕೆ ಕಾರಣ…
ವೆಂಕಯ್ಯ ನಾಯ್ಡುರವರು ಕರ್ನಾಟಕದಿಂದ ರಾಜ್ಯ ಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರೂ ರಾಜ್ಯಕ್ಕಾಗಿ ಏನೂ ಕೆಲಸ ಮಾಡಿಲ್ಲ ಎಂದು ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ.
ಹಾಗೂ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ವೆಂಕಯ್ಯ ನಾಯ್ಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಟ್ವೀಟ್ ಕನ್ನಡಿಗರನ್ನು ಪರೋಕ್ಷವಾಗಿ ಅಪಮಾನ ಮಾಡುವ ರೀತಿ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿವಾದಾತ್ಮಕ ಟ್ವೀಟ್’ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಗ್ಗೇಶ್’ರವರು ತಮ್ಮ ಟ್ವೀಟ್’ನ್ನು ಅಳಿಸಿ ಹಾಕಿದ್ದಾರೆ.
ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಯಾವಾಗಲು ಕನ್ನಡದ ಚಿತ್ರರಂಗ, ನೆಲ, ಜಲದ ವಿಷಯ ಬಂದಾಗ ಮೊದಲಿಗರಾಗಿ ಮಾತನಾಡುವ ಜಗ್ಗೇಶ್’ರವರು, ಪಕ್ಷ ಅಂತ ಬಂದಾಗ ಬೇರೆ ರೀತಿ ಮಾತನಾಡುತ್ತಾರಯೇ! ಹಾಗಾದ್ರೆ ಅವರು ಮಾಡಿರುವ ಟ್ವೀಟ್’ನಲ್ಲಿ ಬೇರೆ ಅರ್ಥ ಏನಾದ್ರೂ ಇದೆಯಾ? ಅದನ್ನ ನೀವೇ ಹೇಳ್ಬೇಕು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…