News

ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!
ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…
ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…
ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…
ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…
ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!
ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?
ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!
ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…
ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..
ಸಿನಿಮಾ

ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

622

ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ನವರಸ ನಾಯಕ ಜಗ್ಗೇಶ್’ರವರು ವೆಂಕಯ್ಯ ನಾಯ್ಡುರವರು  ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಸಂದೇಶವನ್ನು ಬರೆದುಕೊಂಡಿದ್ದು, ಇದು ಕನ್ನಡಿಗರಿಗೆ ಅಪಮಾನ ಮಾಡುವ ರೀತಿ ಇದೆ ಎಂದು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲ್ಲಿ ಆಕ್ರೋಶಗೊಂಡಿದ್ದಾರೆ.

ಏನದು ಟ್ವೀಟ್..! 

ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು.

ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.

ಕನ್ನಡಿಗರ ಆಕ್ರೋಶಕ್ಕೆ ಕಾರಣ… 

ವೆಂಕಯ್ಯ ನಾಯ್ಡುರವರು ಕರ್ನಾಟಕದಿಂದ ರಾಜ್ಯ ಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರೂ ರಾಜ್ಯಕ್ಕಾಗಿ  ಏನೂ ಕೆಲಸ ಮಾಡಿಲ್ಲ ಎಂದು ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ.

ಹಾಗೂ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ವೆಂಕಯ್ಯ ನಾಯ್ಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಟ್ವೀಟ್ ಕನ್ನಡಿಗರನ್ನು ಪರೋಕ್ಷವಾಗಿ ಅಪಮಾನ ಮಾಡುವ ರೀತಿ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿವಾದಾತ್ಮಕ ಟ್ವೀಟ್’ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಗ್ಗೇಶ್’ರವರು ತಮ್ಮ ಟ್ವೀಟ್’ನ್ನು ಅಳಿಸಿ ಹಾಕಿದ್ದಾರೆ.

ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಯಾವಾಗಲು ಕನ್ನಡದ ಚಿತ್ರರಂಗ, ನೆಲ, ಜಲದ ವಿಷಯ ಬಂದಾಗ ಮೊದಲಿಗರಾಗಿ ಮಾತನಾಡುವ ಜಗ್ಗೇಶ್’ರವರು, ಪಕ್ಷ ಅಂತ ಬಂದಾಗ ಬೇರೆ ರೀತಿ ಮಾತನಾಡುತ್ತಾರಯೇ! ಹಾಗಾದ್ರೆ ಅವರು ಮಾಡಿರುವ ಟ್ವೀಟ್’ನಲ್ಲಿ ಬೇರೆ ಅರ್ಥ ಏನಾದ್ರೂ ಇದೆಯಾ? ಅದನ್ನ ನೀವೇ ಹೇಳ್ಬೇಕು….

 

 

About the author / 

Nimma Sulochana

Follow Us on Facebook

Categories

ಇಂದಿನ ಅವಮಾನ
0C
humidity: 0%
wind: 0km/h
H 0 • L 0

Date wise

  • 6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

ಏನ್ ಸಮಾಚಾರ