ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ.
ಸದ್ಯ ಮಂಡ್ಯದ ಸ್ಥಿತಿ ನೋಡುತ್ತಿದ್ದರೇ ಇದು ಯಾವ ಸಿನಿಮಾಗಿಂತ ಕಮ್ಮಿ ಇಲ್ಲ ಅನಿಸುತ್ತಿದೆ. ಅಂತಿಮ ಹಂತದವರೆಗೂ ಸ್ಪಷ್ಟವಾದ ಫಲಿತಾಂಶ ಸಿಗುವುದು ಕಷ್ಟವಾಗಬಹುದು. ಹಾಗಿದ್ರೆ, ಮಂಡ್ಯದಲ್ಲಿ ಬೆಳಿಗ್ಗೆಯಿಂದ ಮತ ಎಣಿಕೆ ಹೇಗಿತ್ತು? ಸುಮಲತಾಗೆ ಎಷ್ಟು ಮತ ಸಿಕ್ಕಿವೆ? ನಿಖಿಲ್ ಕುಮಾರ್ ಗೆ ಎಷ್ಟು ಮತಗಳು ಸಿಕ್ಕಿವೆ ಎಂಬ ವಿವರ ಮುಂದೆ ಓದಿ…..
ಅಂಚೆ ಮತಗಳಲ್ಲಿ ಸುಮಲತಾ ಮುನ್ನಡೆ :ಮಂಡ್ಯದಲ್ಲಿ ಮತ ಎಣಿಕೆ ಆರಂಭವಾದಾಗ ಮೊದಲು ಅಂಚೆ ಮತಗಳನ್ನ ಪರಿಗಣನೆಗೆ ತೆಗೆದುಕೊಳ್ಳಲಾಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದರು. ಹೀಗೆ ಆರಂಭಿಕ ಮುನ್ನಡೆ ಸಾಧಿಸಿದ ಸುಮಲತಾಗೆ ಇದು ಆತ್ಮವಿಶ್ವಾಸ ಹೆಚ್ಚಿಸಿತ್ತು. ಆದ್ರೆ, ಈ ಆತ್ಮ ವಿಶ್ವಾಸ ಹೆಚ್ಚು ಸಮಯ ಉಳಿಯಲಿಲ್ಲ.
ಮೊದಲ ಸುತ್ತಿನಲ್ಲಿ ನಿಖಿಲ್ ಮುನ್ನಡೆ :ಸುಮಲತಾ ಅವರಿಗೆ ಅಂಚೆ ಮತಗಳಲ್ಲಿ ಮುನ್ನಡೆ ಸಿಕ್ಕ ಖುಷಿ ಹೆಚ್ಚು ಸಮಯ ಇರಲಿಲ್ಲ. ಯಾಕಂದ್ರೆ ಮೊದಲ ಸುತ್ತ ಮುಗಿಯುಷ್ಟರಲ್ಲಿ ನಿಖಿಲ್ ಕುಮಾರ್ ಸ್ವಾಮಿ ಮುನ್ನಡೆ ಸಾಧಿಸಿದರು. ಮೊದಲು 12 ಮತಗಳ ಅಂತರ ಸಾಧಿಸಿದರು. ನಂತರ 50 ಮತಗಳ ಅಂತರ ಸಾಧಿಸಿದರು. ಆಮೇಲೆ 1050 ಮತಗಳವರೆಗೂ ಅಂತರ ಕಾಯ್ದುಕೊಂಡರು.
ಹಾವು-ಏಣಿ ಆಟ ಆರಂಭ ನಿಖಿಲ್ :1900ಕ್ಕೂ ಹೆಚ್ಚು ಮತಗಳು ಅಂತರ ಕಾಯ್ದುಕೊಂಡಿದ್ದರು ಎಂದು ಖುಷಿ ಪಡುವಷ್ಟರಲ್ಲಿ ಮತ್ತೆ ಸುಮಲತಾ ಮುನ್ನಡೆ ಸಾಧಿಸಿದರು. 130 ಮತಗಳ ಮುನ್ನಡೆ ಸಾಧಿಸಿ ಮತ್ತೆ ಸಿಎಂ ಪುತ್ರನಿಗೆ ಪೈಪೋಟಿ ನೀಡಿದರು. ಹೀಗೆ ಬೆಳಿಗ್ಗೆ 10.50ರ ವರೆಗೂ ಹಿನ್ನಡೆ-ಮುನ್ನಡೆ ಎಂದೇ ಹಾವು ಏಣಿ ಆಟ ನಡೆಯುತ್ತಿದೆ. ಸದ್ಯಕ್ಕೆ ಸುಮಲತಾ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.