ಸುದ್ದಿ

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

30

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್‌ ಬ್ಯಾಟ್ಸ್‌) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ