ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.