ಆರೋಗ್ಯ

ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

201

ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಆರೋಗ್ಯ ಸಮಸ್ಯೆಗಳು..

ಹೃದಯದ ಮೇಲೆ ಪರಿಣಾಮ :-

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಗ್ಯಾಸ್ಟ್ರಿಕ್ ತೊಂದರೆಗಳು:-

ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಮಧುಮೇಹದ ಹೆಚ್ಚಿನ ಅಪಾಯ:-

ಬ್ರೇಕ್‌ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್‌ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ತಲೆಗೂದಲು ನಷ್ಟವಾಗಬಹುದು:-

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್‌ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್‌ಭರಿತ ಬ್ರೇಕ್‌ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಬೊಜ್ಜು ಹೆಚ್ಚುತ್ತದೆ:-

ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್‌ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ:-

ಬ್ರೇಕ್‌ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…