ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.

ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.
ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.