ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.
ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.
ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.
ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.