ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ.
ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ 25 ಲಕ್ಷ ರೂ. ನೀಡಲಾಗಿದೆ.
ಇನ್ಫೋಸಿಸ್ ಫೌಂಡೇಶನ್ ನಿಂದ 10 ಲಕ್ಷ ರೂ., ನ್ಯಾಷನಲ್ ಟ್ರಾವೆಲ್ಸ್ ನಿಂದ 10 ಲಕ್ಷ ರೂ., ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 10 ಲಕ್ಷ ರೂ. ಸೇರಿದಂತೆ ಅನೇಕರು ನೆರವು ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು 20 ಗುಂಟೆ ಜಮೀನು ನೀಡುವುದಾಗಿ ಹೇಳಿದ್ದಾರೆ. ಇದೇ ರೀತಿ ವಿದ್ಯಾರ್ಥಿಗಳು, ನೌಕರರು, ಸಂಘ-ಸಂಸ್ಥೆಯವರು ಗುರು ಅವರ ಕುಟುಂಬಕ್ಕೆ ನೆರವಾಗಿದ್ದಾರೆ.
ಪರಿಹಾರದ ಹಣದ ಹಂಚಿಕೆ ವಿಚಾರದಲ್ಲಿ ಗುರು ಅವರ ಪತ್ನಿ ಕಲಾವತಿ ಮತ್ತು ತಂದೆ -ತಾಯಿ ಹಾಗೂ ಸಹೋದರರ ನಡುವೆ ಘರ್ಷಣೆ ನಡೆದು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ, ಪೊಲೀಸರು ಈ ವಿಚಾರ ಬೇರೆಯವರಿಗೆ ಗೊತ್ತಾದರೆ, ಕೆಟ್ಟ ಸಂದೇಶ ಹೋಗುತ್ತದೆ. ತಿಥಿ ಕಾರ್ಯ ಮುಗಿದ ಬಳಿಕ ಸಮಸ್ಯೆ ಪರಿಹರಿಸುವುದಾಗಿ ಗುರು ಕುಟುಂಬದವರನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…