ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

212

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…