ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

503

ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ ದೇಬ್, ತಮ್ಮ ಮಹಿಳಾ ಸಹೋದ್ಯೋಗಿ ಸಮಾಜ ಕಲ್ಯಾಣ ಸಚಿವೆ ಸಂತನಾ ಚಕ್ಮಾ ಅವರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇರುಸುಮುರುಸು ಸಂತನಾ ಕೈ ತಳ್ಳಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಂತೆ ಪ್ರತಿಪಕ್ಷಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿವೆ. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕೂಡಾ ಪಾಲ್ಗೊಂಡಿದ್ದು, ಈ ಘಟನೆಯಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮನೋಜ್ ಕಾಂತಿ ದೇಬ್ ಆರೋಪವನ್ನು ನಿರಾಕರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.