ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…