ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.
ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.
ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್‍ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.
“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.
ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…