ಸುದ್ದಿ

ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

91

ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ ವೃತ್ತಿಯಲ್ಲಿ ಮಾಡಿಸಿದ ರೋಮಾಂಚಕ ಫೋಟೋಶೂಟ್‍ಗಳಲ್ಲಿ ಇದು ಒಂದಾಗಿದೆ. ನಾನು ಕೆಲವೇ ಸಮಯದಲ್ಲಿ ಈ ಫೋಟೋಶೂಟ್ ಮಾಡಿಸಿದ್ದೇನೆ. ಇದು ಒಳ್ಳೆಯ ಅನುಭವ” ಎಂದು ಹೇಳಿದ್ದಾರೆ.

ಸಮೀರಾ ಫೋಟೋ ನೋಡಿ ಕೆಲವರು, ನೀವು ಈ ಫೋಟೋದಲ್ಲಿ ಸೂಪರ್ ಕೂಲ್ ಆಗಿ ಕಾಣಿಸುತ್ತಿದ್ದೀರಾ ಎಂದು ನಿಮಗೆ ಅನಿಸಿರಬಹುದು. ಆದರೆ ಪ್ರೆಗ್ನೆನ್ಸಿ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವ ಅವಶ್ಯಕತೆ ಆದರೂ ಏನಿತ್ತು. ದಯವಿಟ್ಟು ಹುಷಾರಾಗಿರಿ. ಮಕ್ಕಳು ದೇವರು ಕೊಟ್ಟ ಉಡುಗೊರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವು ಅಭಿಮಾನಿಗಳು, ಗರ್ಭಿಣಿಯಾಗಿರುವ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವುದು ಸರಿಯಲ್ಲ ಎಂದು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ನಿಮಗೆ ತಲೆ ಕೆಟ್ಟಿದ್ದೀಯಾ ಎಂದು ಕಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಸಮೀರಾ ಅವರ ಈ ಫೋಟೋಗಳಿಗೆ ಯಾವುದೇ ಫಿಲ್ಟರ್ ಅಥವಾ ಫೋಟೋಶಾಪ್ ಮಾಡಲಿಲ್ಲ. ಈ ಫೋಟೋಗಳು ಸುಂದರವಾಗಿ ಬಂದಿದ್ದು, ಇದರಿಂದ ಸಮೀರಾ ಖುಷಿಯಾಗಿದ್ದಾರೆ. ಆದರೆ ಅವರ ಅಭಿಮಾನಿಗಳು ಈ ಫೋಟೋ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮೀರಾ ರೆಡ್ಡಿ 2014ರಲ್ಲಿ ಉದ್ಯಮಿ ಅಕ್ಷಯ್ ವಾರ್ದೆ ಅವರನ್ನು ಮದುವೆಯಾಗಿದ್ದರು. ಸಮೀರಾ ರೆಡ್ಡಿಗೆ ಈಗಾಗಲೇ ಒಂದು ಗಂಡು ಮಗು ಇದ್ದು, ಈಗ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಮೀರಾ ರೆಡ್ಡಿ ಬಹುಭಾಷಾ ನಟಿಯಾಗಿದ್ದು, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಅವರ ಜೊತೆ ನಟಿಸಿದ್ದಾರೆ. ಅಲ್ಲದೇ ಕನ್ನಡದಲ್ಲೂ ಕಿಚ್ಚ ಸುದೀಪ್ ಅವರ ಜೊತೆ `ವರದನಾಯಕ’ ಚಿತ್ರದಲ್ಲಿ ನಟಿಸಿದ್ದಾರೆ. ಸಮೀರಾ 2014ರಲ್ಲಿ ಮದುವೆ ಆದ ಬಳಿಕ ಚಿತ್ರರಂಗದಿಂದ ದೂರ ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…