ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.
ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.
ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.
ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…