ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಬೊಜ್ಜು :
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , ೫೦೦೦ ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :
ಬಿ-೬, ಬಿ-೧೨ ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡ:
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, ೪ ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ಖಿನ್ನತೆ :
‘ಮೈಂಡ್ ಸಂಸ್ಥೆ,,’ ಇತ್ತೀಚೆಗೆ ನಡೆಸಿದ, ಸರ್ವೇಕ್ಷಣೆಯ ಪ್ರಕಾರ, ಖಿನ್ನತೆಗೆ ಒಳಗಾದವರು ಒಂದು ಬಾಳೆಹಣ್ಣನು ಸೇವಿಸಿದ ಬಳಿಕ, ಹೆಚ್ಚಿನವರಲ್ಲಿ ಸುಧಾರಣೆ ಕಂಡುಬಂದಿದೆ. ಟ್ರಿಪ್ಟೋಪ್ಯಾನ್ ಎಂಬ ಪ್ರೋಟೀನ್ ಇದಕ್ಕೆ ಕಾರಣ. ನಮ್ಮ ದೇಹ ಈ ಪ್ರೋಟೀನ್ ನನ್ನು ಸೆರೋಟಿನ್ ಆಗಿ ಪರಿವರ್ತಿಸುತ್ತದೆ. ಇದರಿಂದ ಉದ್ವೇಗಶಮನಗೊಂಡು ಪ್ರಪುಲ್ಲಚಿತ್ತರನ್ನಾಗಿಸುವ ಅಂಶವೆಂದು ಪರಿಗಣಿತವಾಗಿದೆ. ಕಾಡುವ ನಮ್ಮೆಲ್ಲರ ಖಿನ್ನತೆಗೆ ಮಾತ್ರೆಗಳ ಮೊರೆಹೋಗುವಬದಲು, ದಿನಕ್ಕೊಂದು ಬಾಳಿಹಣ್ಣಿನ ಸೇವನೆಯಿಂದ ಉಪಶಮನಪಡೆಯಬಹುದು. ಬಾಳೆಹಣ್ಣಿನಲ್ಲಿರುವ ಬಿ-೬ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಸಮಸ್ಥಿತಿಯಲ್ಲಿರಿಸಿ, ನಮ್ಮ ಮನಸ್ಥಿತಿಯ ಮೇಲೆ ಪರಿಣಾಮವನ್ನುಂಟುಮಾಡುತ್ತದೆ.
ರಕ್ತಹೀನತೆ :
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…