ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಹೈದರಾಬಾದಿನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ದರ್ಶನ್ ಫೋಟೊ ಶೂಟ್ ಮುಗಿದಿದೆ. ಸ್ಕ್ರೀನ್ ಟೆಸ್ಟ್ ಮತ್ತು ಡ್ರೆಸ್ ಟ್ರಯಲ್ ಕೆಲಸಗಳು ನೆರವೇರಿದೆ. ಎರಡು ದಿನ ದರ್ಶನ್ ಅಲ್ಲಿದ್ದು ಎಲ್ಲಾ ಪಾತ್ರಕ್ಕೆ ಬೇಕಾದ ಕಾಸ್ಟ್ಯೂಮ್ಗಳನ್ನು ಹಾಕಿಕೊಂಡು ಲುಕ್ ಹೇಗಿರತ್ತೆ ಅನ್ನೋ ಟೆಸ್ಟ್ ಮಾಡಿದ್ದಾರೆ. ಫೋಟೊ ಎಡಿಟಿಂಗ್ ಕೆಲಸ ಜೋರಾಗೇ ನಡೀತಿದೆ.
ದರ್ಶನ್ ದುರ್ಯೋಧನನಾಗಿ ಝಗಮಗಿಸಿದ್ದು ಬಾಹುಬಲಿ ಸಿನಿಮಾಕ್ಕೆ ಹಾಕಿದ್ದ ಸೆಟ್ ನಲ್ಲೆ. ಬಾಹುಬಲಿ ಇದಾಗಲೇ ಸಾವಿರ ಕೋಟಿ ಗಳಿಸಿ ಜಯಭೇರಿ ಬಾರಿಸಿರೋದ್ರಿಂದ ಅದೇ ಜಾಗದಲ್ಲಿ ಫೋಟೋ ಶೂಟ್ ಆರಂಭ ಮಾಡಿರೋ ಕುರುಕ್ಷೇತ್ರ ಗೆದ್ದು ಬರುತ್ತೆ ಅನ್ನೋ ನಂಬಿಕೆ ಚಿತ್ರ ತಂಡದ್ದು.
ಕಿಚ್ಚ ಸುದೀಪ್, ಯಶ್ ಕುರುಕ್ಷೇತ್ರಕ್ಕೆ ಕಾಲಿಡೋದು ನಿಜವೇ?
ಶಿವರಾಜ್ ಕುಮಾರ್, ಸುದೀಪ್, ಯಶ್ ಕುರುಕ್ಷೇತ್ರ ದಲ್ಲಿ ಮಿಂಚಲಿದ್ದಾರಾ ಅನ್ನುವ ಪ್ರಶ್ನೆಗೆ ಮಾತ್ರ ಇನ್ನೂ ಉತ್ತರ ಸಿಕ್ಕಿಲ್ಲ. ಮೂಲದ ಪ್ರಕಾರ ದಕ್ಷಿಣ ಭಾರತದ ನಟ ನಟಿಯರನ್ನು ಕರೆತರುವ ಯೋಜನೆ ಚಾಲ್ತಿಯಲ್ಲಿದೆಯಂತೆ. ಹಾಗೇನಾದರೂ ಆದ್ರೆ ಇಡೀ ದಕ್ಷಿಣ ಭಾರತವೇ ನೋಡುವ ಭರ್ಜರಿ ಸಿನಿಮಾ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣನಂಥ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ನಾಗಣ್ಣ ಕುರುಕ್ಷೇತ್ರದ ಚುಕ್ಕಾಣಿ ಹಿಡಿದಿದ್ದಾರೆ. ನಿರ್ಮಾಪಕ ಮುನಿರತ್ನ ಅಂದುಕೊಂಡಂತೆ ನಡೆದರೆ ಒಂದೆರಡು ತಿಂಗಳಲ್ಲಿ ಮಹೂರ್ತ ನೆರವೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…